17/03/2026
ಮೈಸೂರು ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದ ವತಿಯಿಂದ ಮಾ.22ರ ಭಾನುವಾರ ಮೈಸೂರು ನಗರದ ಕಲಾಮಂದಿರದಲ್ಲಿ 30ನೇ ವಾರ್ಷಿಕ ಪ್ರತಿಭಾ ಪುರಸ್ಕಾರ ಹಾಗೂ ವಿವಿಧ ಕ್ಷೇತ್ರಗಳ ಸಾಧಕರುಗಳಿಗೆ ಸನ್ಮಾನ ಸಮಾರಂಭವನ್ನು ಆಯೋಜಿಸಲಾಗಿದೆ ಮೈಸೂರು, ಚಾಮರಾಜನಗರ, ಮಂಡ್ಯ ಹಾಗೂ ಕೊಡಗು ಜಿಲ್ಲೆಗಳಲ್ಲಿ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳಲ್ಲಿ 2025ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಶೇಕಡ 85ಕ್ಕಿಂತ ಹೆಚ್ಚು ಅಂಕ ಗಳಿಸಿರುವ ಸುಮಾರು 300ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ನೀಡಲಾಗುವುದು. ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿ ಮಾಡಬೇಕೆಂದು ಮನವಿ ಎಂ ಜಯಕುಮಾರ್ ಜಿಲ್ಲಾಧ್ಯಕ್ಷರು ಜಿಲ್ಲಾ ಉಪ್ಪಾರ ಯುವಕರ ಸಂಘ (ರಿ) ಚಾಮರಾಜನಗರ ಜಿಲ್ಲೆ