14/05/2026
ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ವತಿಯಿಂದ NEET ಪರೀಕ್ಷೆ ಪ್ರಶ್ನೆ ಪತ್ರಿಕೆಗಳ ಸೋರಿಕೆ ಪ್ರಕರಣಗಳನ್ನು ಖಂಡಿಸಿ ಹಾಗೂ ಕಠಿಣ ಕಾನೂನು ಜಾರಿಗೆ ಆಗ್ರಹಿಸಿ ಇಂದು ಗಂಗಾವತಿಯ ತಹಸಿಲ್ದಾರ್ ಅವರ ಮೂಲಕ ಮಾನ್ಯ ಪ್ರಧಾನಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ.
ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಟವಾಡುವ ಭ್ರಷ್ಟ ವ್ಯವಸ್ಥೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಲಾಗಿದೆ.
ಈ ಸಮಯದಲ್ಲಿ ಕರ್ನಾಟಕ ವಿದ್ಯಾರ್ಥಿ ಸಂಘಟನೆಗಳು ಯಮುನಾ ಚಳ್ಳೂರು, ಲಕ್ಷ್ಮಿ, ಸುನೀಲ್ ಮುಂತಾದ ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಕಾರ್ಯಕರ್ತರಿದ್ದರು.