11/07/2022
ನಿಯಮ ಬಾಹಿರವಾಗಿ ತಂಬಾಕು ಉತ್ಪನ್ನ ಮಾರುತ್ತಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ
ಕನಕಪುರ ಟೌನ್ ವ್ಯಾಪ್ತಿಯಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ಕನಕಪುರ ತಾಲ್ಲೂಕು ತನಿಖಾ ತಂಡದ ವತಿಯಿಂದ ಜಂಟಿ ಕಾರ್ಯಾಚರಣೆ ನಡೆಸಿ ನಿಯಮ ಬಾಹಿರವಾಗಿ ತಂಬಾಕು ಉತ್ಪನ್ನಗಳ ಮಾರಾಟ ಹಾಗೂ ಬಳಕೆ ಮಾಡುತ್ತಿದ್ದವರ ಮೇಲೆ ಕೋಟ್ಪಾ 2003 ಕಾಯ್ದೆಯ ಸೆಕ್ಷನ್ 4, ಸೆಕ್ಷನ್ 6A ಅಡಿಯಲ್ಲಿ ಪ್ರಕರಣಗಳನ್ನು ದಾಖಲಿಸಿ, ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಉತ್ಪನ್ನಗಳ ಬಳಕೆಯನ್ನು ನಿಲ್ಲಿಸಬೇಕೆಂದು ತಿಳಿಸಿ ದಂಡ ವಿಧಿಸಲಾಯಿತು.