18/06/2026
📚👗 ಸೇವಾ ಕನ್ನಡಿಗರ ಟ್ರಸ್ಟ್ ವತಿಯಿಂದ ಪುಸ್ತಕ ಹಾಗೂ ವಸ್ತ್ರ ವಿತರಣೆ ಕಾರ್ಯಕ್ರಮ 👗📚
ಶಿಕ್ಷಣ ಮತ್ತು ಸಂಸ್ಕಾರಯುತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ, ಸೇವಾ ಕನ್ನಡಿಗರ ಟ್ರಸ್ಟ್ ವತಿಯಿಂದ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳ ವಿತರಣೆ ಹಾಗೂ ಹೆಣ್ಣು ಮಕ್ಕಳಿಗೆ ವಸ್ತ್ರ ವಿತರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಸಮಾಜ ಚಿಂತಕರು, ಪರಿಸರ ಪ್ರೇಮಿಗಳು ಹಾಗೂ ಗೋಸೇವಕರಾದ ಶ್ರೀಯುತ ಶ್ರೀ ಅಹೋರಾತ್ರರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಕ್ಕಳಿಗೆ ಪುಸ್ತಕಗಳು ಮತ್ತು ವಸ್ತ್ರಗಳನ್ನು ವಿತರಿಸಲಿದ್ದಾರೆ.
📅 ದಿನಾಂಕ: 19-06-2026 (ಶುಕ್ರವಾರ)
🕝 ಸಮಯ: ಮಧ್ಯಾಹ್ನ 2:30
📍 ಸ್ಥಳ: ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ (ಜಿ.ಬಿ.ಎಸ್ ನಗರ), ಯಲಹಂಕ, ಬೆಂಗಳೂರು
ಅಕ್ಷರದಾನದೊಂದಿಗೆ ವಸ್ತ್ರದಾನ – ಮಕ್ಕಳ ಕನಸುಗಳಿಗೆ ರೆಕ್ಕೆ ನೀಡೋಣ..! ❤️
🙏 ಸರ್ವರಿಗೂ ಆತ್ಮೀಯ ಸ್ವಾಗತ